ರಾಜ್ಯಮಟ್ಟದ ಕುಲಾಲ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿ
ಕುಂದಾಪುರ(ಕುಲಾಲ ವರ್ಲ್ಡ್ ಡಾಟ್ ಕಾಮ್) : ‘ಜಾತಿ, ಧರ್ಮಗಳ ಪರದೆ ಮೀರಿದ ಕ್ರೀಡೆ ಎಲ್ಲರನ್ನೂ ಒಟ್ಟುಗೂಡಿಸುತ್ತದೆ. ಕ್ರೀಡಾಕೂಟಗಳ ಮೂಲಕ ಸಂಘಟನೆಯನ್ನು ಇನ್ನಷ್ಟು ಶಕ್ತಿಯುತವಾಗಿಸಲು ಸಾಧ್ಯ’ ಎಂದು ರಾಜ್ಯ ಕುಲಾಲ ಯಾನೆ ಕುಂಬಾರರ ಯುವ ವೇದಿಕೆ ಸ್ಥಾಪಕಾಧ್ಯಕ್ಷ ಅಣ್ಣಯ್ಯ ಕುಲಾಲ್ ಹೇಳಿದರು.
ಇಲ್ಲಿನ ಗಾಂಧಿ ಮೈದಾನದಲ್ಲಿ ರಾಜ್ಯ ಕುಲಾಲ ಯಾನೆ ಕುಂಬಾರರ ಯುವ ವೇದಿಕೆ, ಮಹಿಳಾ ಸಂಘಟನೆಗಳ ಒಕ್ಕೂಟ ಮಂಗಳೂರು, ಕುಲಾಲ ಸಮಾಜ ಸುಧಾರಕರ ಸಂಘ ಆಶ್ರಯದಲ್ಲಿ ಭಾನುವಾರ ನಡೆದ ರಾಜ್ಯ ಮಟ್ಟದ ಕುಲಾಲ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಇಲ್ಲಿ ಕುಲಾಲ ಸಮುದಾಯದವರು ಮಾತ್ರವಲ್ಲದೆ ಎಲ್ಲಾ ಸಮುದಾಯದವರು ಪಾಲ್ಗೊಂಡಿರುವುದು ನಮ್ಮ ಸಂಸ್ಕೃತಿಯ ಪ್ರತೀಕ. ಪ್ರಚಾರ ಬಯಸದ ಕುಲಾಲ ಯುವ ಸಂಘಟನೆ ಹಲವು ವರ್ಷಗಳಿಂದ ಸಮಾಜಮುಖಿ ಕಾರ್ಯ ಮಾಡುತ್ತಿದೆ ಎಂದರು.
ಐಎಂಎ ಜಿಲ್ಲಾ ಸಂಚಾಲಕ ಡಾ.ಉಮೇಶ್ ಪುತ್ರನ್ ಮಾತನಾಡಿ, ಕ್ರೀಡೆಯಿಂದ ದೈಹಿಕ, ಮಾನಸಿಕ ಆರೋಗ್ಯ ಉತ್ತಮವಾಗಿರುತ್ತದೆ. ಇಂದಿನ ಒತ್ತಡದ ಜೀವನ ಶೈಲಿಯಿಂದಾಗಿ ಯುವಜನರು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುತ್ತಿರುವುದು ಕಡಿಮೆಯಾಗುತ್ತಿದೆ. ಅವಕಾಶ ಇದ್ದಾಗ ಎಲ್ಲರೂ ಆದಷ್ಟು ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು ಎಂದರು.
ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಶುಭ ಹಾರೈಸಿದರು. ಕುಲಾಲ ಸಂಘದ ಸ್ಥಾಪಕಾಧ್ಯಕ್ಷ ಉದ್ಘಾಟಿಸಿದರು. ಅವರನ್ನು ಸನ್ಮಾನಿಸಲಾಯಿತು.
ಕುಂದಾಪುರ ಕುಲಾಲ ಸಂಘದ ಅಧ್ಯಕ್ಷ ರಾಘವೇಂದ್ರ ಕುಲಾಲ್ ಹೆಮ್ಮಾಡಿ ಅಧ್ಯಕ್ಷತೆ ವಹಿಸಿದ್ದರು. ಐಎಂಎ ರಾಜ್ಯಾಧ್ಯಕ್ಷ ಡಾ.ವೀರಭದ್ರಯ್ಯ ಟಿ, ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಸದಸ್ಯ ರಾಜೇಶ್ ಕೆ.ಸಿ, ಪತ್ರಕರ್ತ ರಂಜಿತ್ ಕುಲಾಲ್ ಶಿರಿಯಾರ, ಚಕ್ರವರ್ತಿ ಕ್ರಿಕೆಟ್ ಕ್ಲಬ್ನ ಮನೋಜ್ ನಾಯರ್, ಕಾರ್ಕಳ ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್ ಜನ್ಸಾಲೆ, ಕುಲಾಲ ಯುವ ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕುಲಾಲ್ ನಡೂರು, ಜಿಲ್ಲಾಧ್ಯಕ್ಷ ಮಂಜುನಾಥ ಕುಲಾಲ್ ಜನ್ಸಾಲೆ, ಕುಂದಾಪುರ ಅಧ್ಯಕ್ಷ ಹರೀಶ್ ಕುಲಾಲ್ ಕಟ್ಕೆರೆ, ಬೈಂದೂರು ಅಧ್ಯಕ್ಷ ಸುರೇಶ್ ಕುಲಾಲ್ ಮೆಟ್ಟಿನಹೊಳೆ, ಮಹಿಳಾ ಘಟಕದ ಗೌರವಾಧ್ಯಕ್ಷೆ ಪ್ರತಿಮಾ ವಿನೋದ ಕುಲಾಲ್, ಪ್ರಮುಖರಾದ ಪಾರ್ವತಿ ಎಂ.ವಿ.ಕುಲಾಲ್, ಡಾ.ಜಿ.ಕೆ.ಭಟ್, ಡಾ.ಮಹೇಶ್ ತುಮಕೂರು, ಡಾ.ವಿನೋದ್ ಕುಮಾರ್, ಪಾರ್ವತಿ ಕುಲಾಲ್, ಅನಿತಾ ಅಶೋಕ್ ಕುಲಾಲ್ ಭಾಗವಹಿಸಿದ್ದರು. ಶಿಕ್ಷಕಿ ರೇಖಾ ಪ್ರಭಾಕರ್ ಕುಲಾಲ್ ನಿರೂಪಿಸಿದರು. ಆಶಾ ಕುಲಾಲ್ ವಂದಿಸಿದರು.





