ಪುತ್ತೂರು(ಕುಲಾಲ ವರ್ಲ್ಡ್ ಡಾಟ್ ಕಾಮ್) : ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಘಟಕ ಹಾಗೂ ಪುತ್ತೂರು ಮತ್ತು ಕಡಬ ತಾಲೂಕು ಘಟಕದಿಂದ ಇತ್ತೀಚೆಗೆ ಪುತ್ತೂರು ಬಂಟರ ಭವನದಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ ನೌಕರರ ಜಿಲ್ಲಾ ಶೈಕ್ಷಣಿಕ ಸಮಾವೇಶ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರ್ನಾಟಕ ವಿಧಾನಸಭಾ ಸಭಾಧ್ಯಕ್ಷರು, ಶಾಸಕರು, ವಿಧಾನ ಪರಿಷತ್ ಶಾಸಕರು, ಗಣ್ಯ ಅತಿಥಿಗಳ ಉಪಸ್ಥಿತಿಯಲ್ಲಿ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ವಸಂತ ಮೂಲ್ಯ ಅವರಿಗೆ ಜಿಲ್ಲಾ ಮಟ್ಟದ ಶಿಕ್ಷಣ ರತ್ನ ಪ್ರಶಸ್ತಿ-2026ಯನ್ನು ನೀಡಿ ಗೌರವಿಸಲಾಯಿತು. ಪ್ರಾಮಾಣಿಕ ಸೇವೆ ಜಾಗೃತ ಮನಸ್ಸು, ಶಿಕ್ಷಕ ಸಮುದಾಯಕ್ಕೆ ನೀಡುತ್ತಿರುವ ನೆರವನ್ನು ಸ್ಮರಿಸಿ ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ (ರಿ) ದಕ್ಷಿಣ ಕನ್ನಡ ಜಿಲ್ಲಾ ಘಟಕ ವತಿಯಿಂದ ಜಿಲ್ಲಾ ಮಟ್ಟದ ಶಿಕ್ಷಣ ರತ್ನ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗಿದೆ.

