ಸುಳ್ಯ(ಕುಲಾಲ ವರ್ಲ್ಡ್ ಡಾಟ್ ಕಾಮ್): ಕುಲಾಲ ಸುಧಾರಕ ಸೇವಾ ಸಂಘ ಸುಳ್ಯ ಬೆಳ್ಳಾರೆ ವತಿಯಿಂದ 29 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮಾ. 29 ರಂದು ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ಬೆಳಿಗ್ಗೆ ಶ್ರೀ ಸತ್ಯನಾರಾಯಣ ಪೂಜೆ ಆರಂಭವಾಯಿತು. ಮಧ್ಯಾಹ್ನ ಕುಲಾಲ ಭಜನಾ ತಂಡ ಸುಳ್ಯ ಬೆಳ್ಳಾರೆ ಇವರ ವತಿಯಿಂದ ಭಜನಾ ಕಾರ್ಯಕ್ರಮ ನಡೆಯಿತು. ಆ ಬಳಿಕ ಮಹಾಪೂಜೆ,ಪ್ರಸಾದ ವಿತರಣೆ ನಡೆಯಿತು. ನಂತರ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ನಾಗೇಶ್ ಕುಲಾಲ್ ತಡಗಜೆ ಮತ್ತು ಕಾರ್ಯದರ್ಶಿ ಧನಂಜಯ ಕುಲಾಲ್, ಖಜಾಂಚಿ ದಿನೇಶ್ ನೆಟ್ಟಾರ್, ಉಪಾಧ್ಯಕ್ಷರಾದ ಸುಮಿತ್ರಾ ರವಿಚಂದ್ರ ಮಣಿಮಜಲು ಮತ್ತು ಆಡಳಿತ ಸಮಿತಿ ಸರ್ವಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.


