ಮಂಗಳೂರು(ಕುಲಾಲ ವರ್ಲ್ಡ್ ಡಾಟ್ ಕಾಮ್) : ಇಲ್ಲಿನ ಡಾ. ಎಂ.ವಿ. ಶೆಟ್ಟಿ ಇನ್ಸ್ಟಿಟ್ಯೂಷನ್ನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಮೀಳಾ ಎಂ. ಕುಲಾಲ್ ಅವರು ಮಂಗಳೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದುಕೊಂಡಿದ್ದಾರೆ. ಇವರು ಮಂಗಳೂರು ವಿಶ್ವವಿದ್ಯಾಲಯಕ್ಕೆ `Socio Educational and Cultural Status of Coastal Karnataka Women at Colonial Period’ ಎಂಬ ವಿಷಯದ ಮೇಲೆ ಮಹಾಪ್ರಬಂಧ ಮಂಡಿಸಿದ್ದರು. ಇವರು ಡಾ. ಮೀನಾಕ್ಷಿ ಲೋಕೇಶ್ ಅವರ ಮಾರ್ಗದರ್ಶನದಲ್ಲಿ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದ್ದರು. ಇತ್ತೀಚೆಗೆ ನಡೆದ ವಿಶ್ವವಿದ್ಯಾಲಯದ ೪೪ನೇ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು. ಪ್ರಮೀಳಾ ಎಂ. ಕುಲಾಲ್ ಅವರು ಕೊಲ್ಯ ಚಂದ್ರಶೇಖರ ಕುಲಾಲ್ ಅವರ ಧರ್ಮಪತ್ನಿ.

