ಕಾಸರಗೋಡು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2025-26ನೇ ಸಾಲಿನ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಇ) 10ನೇ ತರಗತಿಯ ಪರೀಕ್ಷೆಯಲ್ಲಿ ಪೆರಿಯೇ ಕಾಸರಗೋಡು ಜವಾಹರ ನವೋದಯ ವಿದ್ಯಾಲಯ ವಿದ್ಯಾರ್ಥಿ ಚಿರಾಗ್ ವಿಜಯ್ ಅವರು 98.5% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ತಲಪಾಡಿ ತಚ್ಚಣಿ ನಿವಾಸಿ, ಕೊಡ್ಲಮೊಗರು ವಾಣಿವಿಜಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಿಜಯಕುಮಾರ್ ಅವರ ಸುಪುತ್ರ.


