ಮಂಗಳೂರು(ಕುಲಾಲ ವರ್ಲ್ಡ್ ಡಾಟ್ ಕಾಮ್) : ಸಮಾಜದ ಸರ್ವತೋಮುಖ ಏಳಿಗೆ ಮತ್ತು ಜನರಲ್ಲಿ ಜಾಗೃತಿ ಮೂಡಿಸುವ ಮಹತ್ತರ ಉದ್ದೇಶದೊಂದಿಗೆ ಮಾಣಿಲ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಸಮಾಲೋಚನಾ ಸಭೆಯನ್ನು ಆಯೋಜಿಸಲಾಗಿದೆ. ಈ ಮಹತ್ವದ ಸಭೆಯು ಬರುವ ಮೇ 28, 2026ರ ಗುರುವಾರದಂದು ಬೆಳಿಗ್ಗೆ 10.00 ಗಂಟೆಗೆ ಸರಿಯಾಗಿ ವೀರನಾರಾಯಣ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ.
ಈ ಸಮಾಲೋಚನಾ ಸಭೆಯಲ್ಲಿ ಜಿಲ್ಲೆಯ ಎಲ್ಲಾ ಕುಲಾಲ ಸಂಘಗಳ ಮಾಜಿ ಮತ್ತು ಹಾಲಿ ಪದಾಧಿಕಾರಿಗಳು, ಸಮಾಜದ ಹಿರಿಯ ಮುಖಂಡರು ಹಾಗೂ ಸಹಕಾರ ಸಂಘಗಳ ಹಾಲಿ ಮತ್ತು ಮಾಜಿ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಅಲ್ಲದೆ ಮಹಿಳಾ ಮಂಡಳಗಳ ಪದಾಧಿಕಾರಿಗಳು, ಕುಲಾಲ ಕುಂಬಾರರ ಯುವವೇದಿಕೆಯ ಸದಸ್ಯರು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಮತ್ತು ಧಾರ್ಮಿಕ ಸಂಘಟನೆಗಳಲ್ಲಿ ಸಕ್ರಿಯರಾಗಿರುವ ಸಮಾಜದ ಪ್ರಮುಖರು ಈ ಸಭೆಯಲ್ಲಿ ಕಡ್ಡಾಯವಾಗಿ ಭಾಗವಹಿಸಿ, ಸಮಾಜದ ಹಿತದೃಷ್ಟಿಯಿಂದ ತಮ್ಮ ಅಮೂಲ್ಯ ಸಲಹೆ ಸೂಚನೆಗಳನ್ನು ನೀಡಬೇಕೆಂದು ವಿನಂತಿಸಲಾಗಿದೆ. ಸಮಾಜದ ಬಾಂಧವರೆಲ್ಲರೂ ಈ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಸಮಾಜದ ಹಿತಚಿಂತಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


