ಉಡುಪಿ(ಕುಲಾಲ ವರ್ಲ್ಡ್ ಡಾಟ್ ಕಾಮ್): 2025-26ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಒಳಕಾಡು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಅಮೂಲ್ಯ 94.08% ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶಾಲೆಗೆ 7ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇವರು ಉಡುಪಿ ನಿವಾಸಿಗಳಾದ ಉಡುಪಿಯ ಚಂದ್ರಶೇಖರ್ ಕುಲಾಲ್ ಹಾಗೂ ಶಶಿಕಲಾ ಕುಲಾಲ್ ದಂಪತಿಯ ಸುಪುತ್ರಿ.

