ವೇಣೂರು(ಕುಲಾಲ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ಬಾಲ ವಿಕಾಸ ಸಮಿತಿ ಧಾರವಾಡ ಇವರ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಇವರು ಮಕ್ಕಳ ದಿನಾಚರಣೆಯ ಪ್ರಯುಕ್ತ ಏರ್ಪಡಿಸಿದ್ದ ಜವಾಹರ್ ಲಾಲ್ ನೆಹರುರವರ ಚಿಂತನೆಗಳು ಎನ್ನುವ ಭಾಷಣ ಸ್ಪರ್ಧೆಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ವೇಣೂರು ಇಲ್ಲಿಯ ವಿದ್ಯಾರ್ಥಿ ಧನುಶ್ರೀ ಎಸ್ ಕುಲಾಲ್ ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ವಿಜೇತ ವಿದ್ಯಾರ್ಥಿಯನ್ನು ಶಾಲೆಯ ಉಪ ಪ್ರಾಂಶುಪಾಲರು, ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ಎಸ್ ಡಿ ಎಂ ಸಿ ಕಾರ್ಯಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಅಭಿನಂದಿಸಿದ್ದಾರೆ.

