ಕಾರ್ಕಳ(ಕುಲಾಲ ವರ್ಲ್ಡ್ ಡಾಟ್ ಕಾಮ್) : ಹೆಬ್ರಿ ಅಮೃತ ಭಾರತಿ ವಿದ್ಯಾಕೇಂದ್ರದ ವಿದ್ಯಾರ್ಥಿ ಪ್ರಥಮ್ ಎ. ಕುಲಾಲ್ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದ ವಿಜ್ಞಾನ ಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
೨೦೨೬-೨೭ನೇ ಸಾಲಿನ ಕ್ಷೇತ್ರ ಮಟ್ಟದ ಗಣಿತ-ವಿಜ್ಞಾನ ಮೇಳ ಹಾಗೂ ಸಂಸ್ಕೃತಿ ಜ್ಞಾನ ಪರಿಚಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಪ್ರಥಮ್, ‘ನವೀನ ವಿಜ್ಞಾನ ಮಾದರಿ’ (Innovative Science Model) ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ. ಈ ಅಭೂತಪೂರ್ವ ಸಾಧನೆಯ ಮೂಲಕ ಶಾಲಾ ಸಂಸ್ಥೆಗೆ ಹಾಗೂ ಉಡುಪಿ ಜಿಲ್ಲೆಗೆ ಕೀರ್ತಿ ತಂದಿದ್ದು, ಪ್ರಥಮ್ಗೆ ಶಾಲಾಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ಹೆತ್ತವರು ಮತ್ತು ಸಾರ್ವಜನಿಕರಿಂದ ಶ್ಲಾಘನೆ ಹಾಗೂ ಅಭಿನಂದನೆಗಳು ವ್ಯಕ್ತವಾಗಿವೆ.

