ಮುಂಬಯಿ(ಕುಲಾಲ ವರ್ಲ್ಡ್ ಡಾಟ್ ಕಾಮ್): ಕುಲಾಲ ಸಂಘ ಮುಂಬಯಿ ಇದರ ಮೀರಾ ರೋಡ್ – ವಿರಾರ್ ಸ್ಥಳೀಯ ಸಮಿತಿಯ ವಾರ್ಷಿಕ ‘ಸ್ನೇಹ ಸಮ್ಮಿಲನ’ ಕಾರ್ಯಕ್ರಮವು ಇತ್ತೀಚೆಗೆ ಅತ್ಯಂತ ಸಡಗರ-ಸಂಭ್ರಮದಿಂದ ಜರುಗಿತು. ಈ ವಿಶೇಷ ವೇದಿಕೆಯಲ್ಲಿ ಸಂಘದ ಹಿರಿಯ ಸಕ್ರಿಯ ಸದಸ್ಯರೂ, ಜನಪ್ರಿಯ ಸುದ್ದಿ ತಾಣ `ಕುಲಾಲ ವರ್ಲ್ಡ್ ಡಾಟ್ ಕಾಮ್’ ನ ಮುಂಬಯಿ ಪ್ರತಿನಿಧಿಯೂ ಆದ ಸತೀಶ್ ಎಸ್. ಬಂಗೇರ ಇರ್ವತ್ತೂರು ಅವರನ್ನು ಸಮಾಜ ಸೇವೆ ಹಾಗೂ ಮಾಧ್ಯಮ ರಂಗದ ಸೇವೆಯನ್ನು ಗುರುತಿಸಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.
ಕಾರ್ಯಕ್ರಮದ ದಿವ್ಯ ಸಾನಿಧ್ಯ ಹಾಗೂ ಅಧ್ಯಕ್ಷತೆಯನ್ನು ಮುಂಬಯಿ ಕುಲಾಲ ಸಂಘದ ಅಧ್ಯಕ್ಷರಾದ ಶ್ರೀ ರಘು ಎ. ಮೂಲ್ಯ ಪಾದೆಬೆಟ್ಟು ವಹಿಸಿದ್ದರು. ಈ ಸಂದರ್ಭದಲ್ಲಿ ಸಂಘದ ಪ್ರಮುಖರಾದ ಶ್ರೀ ಗಿರೀಶ್ ಸಾಲ್ಯಾನ್, ಶ್ರೀ ಸುನಿಲ್ ಸಾಲ್ಯಾನ್, ಶ್ರೀ ವಾಮನ ಮೂಲ್ಯ ಮುಂತಾದ ಗಣ್ಯರು ಉಪಸ್ಥಿತರಿದ್ದು, ಸನ್ಮಾನಿತರಿಗೆ ಶುಭ ಹಾರೈಸಿದರು . ಸಂಭ್ರಮದ ವಾತಾವರಣದಲ್ಲಿ ಜರುಗಿದ ಈ ಸ್ನೇಹ ಸಮ್ಮಿಲನವು ಸಮುದಾಯದ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವಲ್ಲಿ ಯಶಸ್ವಿಯಾಯಿತು.


