ಪುತ್ತೂರು : ಪದವಿ ಪೂರ್ವ ಶಿಕ್ಷಣ ಇಲಾಖೆ ಬೆಂಗಳೂರು ಹಾಗೂ ರಾಮಕೃಷ್ಣ ವಿದ್ಯಾಸಂಸ್ಥೆಗಳ ಆಶ್ರಯದಲ್ಲಿ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ 100ಮೀ ಹರ್ಡಲ್ಸ್ನಲ್ಲಿ ಸೌಮ್ಯಶ್ರೀ ಮೂಲ್ಯ ಕಾವು ದ್ವಿತೀಯ ಸ್ಥಾನ ಪಡೆದು ಮಹಾರಾಷ್ಟ್ರದ ಪುಣೆಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡಿರುತ್ತಾರೆ.
ಮೂಡಬಿದಿರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿರುವ ಇವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾವು ಮತ್ತು ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಹಳೆ ವಿದ್ಯಾರ್ಥಿನಿಯಾಗಿದ್ದಾರೆ. ಇವರು ಮಾಡ್ನೂರು ಗ್ರಾಮದ ಕಾವು ಮಾಣಿಯಡ್ಕ ನಿವಾಸಿ ನಾರಾಯಣ ಮೂಲ್ಯ ಮತ್ತು ಜಯಂತಿರವರ ಪುತ್ರಿ. ಇವರಿಗೆ ಆಳ್ವಾಸ್ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಶಾಂತರಾಮರವರು ತರಬೇತಿ ನೀಡಿರುತ್ತಾರೆ.
ಹರ್ಡಲ್ಸ್ನಲ್ಲಿ ಸೌಮ್ಯಶ್ರೀ ಮೂಲ್ಯ ಕಾವು ರಾಷ್ಟ್ರಮಟ್ಟಕ್ಕೆ ಆಯ್ಕೆ
Students corner
1 Min Read


