ಮಂಗಳೂರು : ಕರ್ನಾಟಕ ರಕ್ಷಣಾ ವೇದಿಕೆಯ (ನಾರಾಯಣ ಗೌಡ ಬಣ) ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಕುಲಾಲ ಸಮೂದಾಯದ ಯುವ ಉದ್ಯಮಿ ಅನಿಲ್ ದಾಸ್ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ದ.ಕ ಜಿಲ್ಲಾ ಘಟಕದ ಕಾರ್ಯಕರ್ತರ ಮಹಾಸಭೆಯಲ್ಲಿ ಅನಿಲ್ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಅನಿಲ ದಾಸ್ ಅವರು ದಾಸ್ ಪ್ರಮೋಷನ್ ಹೋಮ್ ನರ್ಸಿಂಗ್ ಸೇವಾ ಸಂಸ್ಥೆ , ದಾಸ್ ಚಾರಿಟೇಬಲ್ ಟ್ರಸ್ಟ್ ನ ಆಡಳಿತ ನಿರ್ದೇಶಕ ರಾಗಿದ್ದು, ಸುಗ್ಗಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಉದ್ಯಮಿ ಅನಿಲ್ ದಾಸ್ ಆಯ್ಕೆ
Kulal news
1 Min Read





