ಮಂಗಳೂರು : ಕರ್ನಾಟಕ ರಾಜ್ಯ ಕುಂಬಾರ ಸರಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸಭೆಯು ಇತ್ತೀಚೆಗೆ ಮಂಗಳೂರಿನಲ್ಲಿ ನಡೆಯಿತು.
ಕುಲಾಲರ ಮಾತೃ ಸಂಘದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕುಂಬಾರ ಸರಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ, ಬೆಂಗಳೂರು ಪಿಡಬ್ಲ್ಯುಡಿ ಮುಖ್ಯ ಇಂಜಿನಿಯರ್ ಆರ್ . ಶ್ರೀನಿವಾಸ್ ಸಂಘದ ಬೆಳವಣಿಗೆಗಳ ಬಗ್ಗೆ ಮಾತನಾಡಿದರು. ಸಭೆಯಲ್ಲಿ ಸಂಘದ ಚಿಂತನ ಮಂಥನ ನಡೆಯಿತು.
ಸಭೆಯಲ್ಲಿ ಕೆಪಿಟಿಸಿಎಲ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಗೋಪಾಲ್ ಸಾಲ್ಯಾನ್, ಅಗ್ರಿಕಲ್ಚರಲ್ ಆಫೀಸರ್ ಜಯರಾಜ್ ಪ್ರಕಾಶ್, ದಕ ಜಿಲ್ಲಾ ಡೈರೆಕ್ಟರ್ ಆನಂದ್ ಬಂಜನ್, ಬಂಟ್ವಾಳ ಸರಕಾರಿ ಪಾಲಿಟೆಕ್ನಿಕ್ ಉಪನ್ಯಾಸಕ ಉಮೇಶ್, ಪ್ರಕಾಶ್ ಕೆ, ಮುಂತಾದವರು ಉಪಸ್ಥಿತರಿದ್ದು ಮಾತನಾಡಿದರು.