ಮಂಗಳೂರು : ದ.ಕ ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಕುಂಬಾರ ಸಂಘ ಕರಾವಳಿ ವಿಭಾಗ, ಕರಾವಳಿ ಕುಲಾಲ ಕುಂಬಾರರ ಯುವವೇದಿಕೆ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಸರ್ವಜ್ಞ ಜಯಂತಿ ಆಚರಣೆಯು ಫೆ. 20, ಶನಿವಾರ ನಡೆಯಲಿದೆ.
ದ.ಕ ಜಿಲ್ಲಾ ಪಂಚಾಯತ್ ಆವರಣದಲ್ಲಿರುವ ನೇತ್ರಾವತಿ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ೨ನೇ ವರ್ಷದ ಸರ್ವಜ್ಞ ಜಯಂತಿ ಆಚರಣೆ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾಡಳಿತ ಹಾಗೂ ಕುಲಾಲ ಸಮಾಜದ ಪ್ರಮುಖರು ಉಪಸ್ಥಿತರಿರಲಿದ್ದಾರೆ. ಆಸಕ್ತ ಸರ್ವ ಸಮಾಜ ಬಾಂಧವರೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕೋರಲಾಗಿದೆ.