ಮಂಗಳೂರು: 2015-16ನೇ ಸಾಲಿಗೆ ಹಿಂದುಳಿದ ವರ್ಗಗಳ ಜನರು ಕುಂಬಾರಿಕೆಯ ಕಲಾತ್ಮಕ ಉತ್ಪನ್ನಗಳ ತಯಾರಿಕೆಗೆ ಹಾಗೂ ಕೌಶಲ್ಯತೆ ಹೆಚ್ಚಿಸಲು, ಕುಂಬಾರರು ಹಾಗೂ ಕುಂಬಾರಿಕೆ ಸಂಬಂಧದ ವೃತ್ತಿ ಮಾಡುವವರು ಹೆಚ್ಚಿನ ಸಂಖ್ಯೆಯಲ್ಲಿ ಕ್ಲಸ್ಟರ್ ಗಳನ್ನು ಗುರುತಿಸಿ ಕುಂಬಾರ ವೃತ್ತಿ ಸಮಾಜದ ಫಲಾಪೇಕ್ಷಿಗಳಿಗೆ ಸಾಲ ಮತ್ತು ಸಹಾಯಧನ ಸೌಲಭ್ಯ ಒದಗಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪ್ರವರ್ಗ 2ಎನಲ್ಲಿ ಬರುವ ಕುಂಬಾರ ಮತ್ತು ಕುಂಬಾರ ಉಪಜಾತಿಗಳಿಗೆ ಸೇರಿದವರಾಗಿದ್ದು, ಸಾಂಪ್ರದಾಯಿಕ ವೃತ್ತಿಯಾದ ಕುಂಬಾರಿಕೆ ವೃತ್ತಿಯನ್ನು ನಿರ್ವಹಿಸುತ್ತಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮೀಣ ಪ್ರದೇಶದವರಿಗೆ ರೂ.40,000/-ಗಳು ಮತ್ತು ನಗರ ಪ್ರದೇಶದವರಿಗೆ ರೂ.55,000/-ಗಳ ಮಿತಿಯೊಳಗಿದ್ದು, 18 ರಿಂದ 55 ವರ್ಷಗಳ ವಯೋಮಿತಿಯಲ್ಲಿರಬೇಕು.
ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಇಚ್ಚಿಸುವವರು ನಿಗಮದ ಜಿಲ್ಲಾ ಕಛೇರಿಯಲ್ಲಿ ಚೈತನ್ಯ ಸ್ವಯಂ ಉದ್ಯೋಗ ನೇರಸಾಲ ಯೋಜನೆಯ ಅರ್ಜಿ ನಮೂನೆಯನ್ನು ಉಚಿತವಾಗಿ ಪಡೆದು ಮಾ. 10 ರೊಳಗೆ ಅಗತ್ಯ ದಾಖಲೆಗಳೊಂದಿಗೆ ನಿಗಮದ ಜಿಲ್ಲಾ ಕಛೇರಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ನಿಗಮದ ವೆಬ್ ಸೈಟ್ www.karnataka.gov.in/dbcdc ರಲ್ಲಿ ಅಥವಾ ಜಿಲ್ಲಾ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ರೇಡಿಯೋ ಪಾರ್ಕ್ ಬಳಿ, ಉರ್ವಸ್ಟೋರ್, ಮಂಗಳೂರು, ದೂರವಾಣಿ ಸಂಖ್ಯೆ 0824-2456544. ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಕುಂಬಾರ ವೃತ್ತಿಗಳಿಗೆ ಸಾಲ ಮತ್ತು ಸಹಾಯಧನಕ್ಕೆ ಅರ್ಜಿ ಆಹ್ವಾನ
Kulal news
1 Min Read