ಬೆಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾನಿಲಯದ 18ನೇ ಅಂತರ ಕಾಲೇಜು ಕ್ರೀಡಾಕೂಟದ ಹೈಜಂಪ್ (ಎತ್ತರ ಜಿಗಿತ)ನಲ್ಲಿ ಮಂಗಳೂರು ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ನಿಶ್ಮಿತಾ ಜೆ. ಕುಲಾಲ್ ಕಂಚಿನ ಪದಕ ಪಡೆದಿದ್ದಾರೆ. ಇವರು 1.29 ಮೀ ಎತ್ತರ ಜಿಗಿಯುವ ಮೂಲಕ ಪದಕ ತನ್ನದಾಗಿಸಿಕೊಂಡಿದ್ದಾರೆ. ಅಂತಾರಾಷ್ಟ್ರೀಯ ಮಾಜಿ ಅಥ್ಲೀಟ್ ಪ್ರಮೀಳಾ ಅಯ್ಯಪ್ಪ ಹಾಗೂ ಕ್ರಿಕೆಟಿಗ ಎಸ್. ಅರವಿಂದ್ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ರಾಜ್ಯದ ವಿವಿಧ ಕಾಲೇಜುಗಳಿಂದ ಸುಮಾರು 1,700ಕ್ಕೂ ಅಧಿಕ ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದಾರೆ.
Posted by : Dinesh Bangera Irvathur/25/03/2016


