ಬೆಂಗಳೂರು: ಅರಣ್ಯ ಇಲಾಖೆಯು ‘ ಕರ್ನಾಟಕ ಅರಣ್ಯ ಇಲಾಖಾ ಸೇವೆಗಳು (ನೇಮಕಾತಿ) (ತಿದ್ದುಪಡಿ) ನಿಯಮಗಳು 2012ರಂತೆ’ ಅರಣ್ಯ ರಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 17, 2016.
ಒಟ್ಟು 555 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ. ಖುದ್ದಾಗಿ ಅಥವ ಅಂಚೆ ಮೂಲಕ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸುವುದಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ವಿದ್ಯಾರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 2ನೇ ಪಿಯುಸಿ/12ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ : ಅರ್ಜಿ ಸಲ್ಲಿಸಲು ಅಭ್ಯರ್ಥಿಯ ಕನಿಷ್ಠ ವಯೋಮಿತಿ 18 ವರ್ಷಗಳು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ -1ರ ಅಭ್ಯರ್ಥಿಗಳಿಗೆ 32 ವರ್ಷ. ಪ್ರವರ್ಗ 2ಎ/2ಬಿ/3ಎ/3ಬಿ ವರ್ಗದ ಅಭ್ಯರ್ಥಿಗಳಿಗೆ 30 ವರ್ಷ, ಸಾಮಾನ್ಯ ವರ್ಗದವರಿಗೆ 27 ವರ್ಷಗಳ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕಗಳು : ಸಾಮಾನ್ಯ ವರ್ಗ, 2ಎ, 2ಬಿ, 3ಎ, 3ಬಿ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 100 ರೂ. ಸೇವಾಶುಲ್ಕ 12 ರೂ., ಪ.ಜಾ/ಪ.ಪಂ/ಪ್ರವರ್ಗ -1ರ ಅಭ್ಯರ್ಥಿಗಳಿಗೆ 50 ರೂ. 12 ರೂ. ಸೇವಾ ಶುಲ್ಕ. ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿದ ನಂತರ ಮುದ್ರಿತ ಅರ್ಜಿ ಪ್ರತಿಯನ್ನು ತೆಗೆದುಕೊಂಡು ಇ-ಪಾವತಿ ಅಂಚೆ ಕಚೇರಿಯಲ್ಲಿ ಶುಲ್ಕವನ್ನು ಪಾವತಿ ಮಾಡಬೇಕು.
ಆನ್ಲೈನ್ ಮೂಲಕ ಏಪ್ರಿಲ್ 18ರಿಂದ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು ಕೊನೆಯ ದಿನಾಂಕ ಮೇ 17, 2016 ಸಂಜೆ 4.30. ಅರ್ಜಿ ಸಲ್ಲಿಸುವ ವಿಧಾನ ಮತ್ತು ಹೆಚ್ಚಿನ ಮಾಹಿತಿಗಳು www.karnatakaforest.gov.in ವೆಬ್ಸೈಟ್ನಲ್ಲಿ ಲಭ್ಯವಿದೆ.