ಬೆಂಗಳೂರು : ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಶೇಕಡಾ 80ಕ್ಕಿಂತ ಹೆಚ್ಚು ಅಂಕ ಗಳಿಸಿದ ಕುಂಬಾರ ಜನಾಂಗದ ವಿದ್ಯಾರ್ಥಿಗಳಿಂದ ಅಖಿಲ ಕರ್ನಾಟಕ ಕುಂಭೇಶ್ವರ ಸೇವಾ ಟ್ರಸ್ಟ್ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿಯನ್ನು ಆಹ್ವಾನಿಸಿದೆ. ಅರ್ಹ ವಿದ್ಯಾರ್ಥಿಗಳು ವಿವರಗಳನ್ನು ಜೂನ್ 20ರೊಳಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿಯ ಜೊತೆಗೆ ಅಂಕ ಪಟ್ಟಿಯ ನಕಲು ಪ್ರತಿ ಹಾಗೂ ಎರಡು ಪಾಸ್ ಪೋರ್ಟ್ ಅಳತೆಯ ಭಾವಚಿತ್ರವನ್ನು ಸಲ್ಲಿಸಲು ಕೋರಲಾಗಿದೆ. ಅರ್ಜಿ ಸಲ್ಲಿಸಬೇಕಾದ ವಿಳಾಸ : ಅಖಿಲ ಕರ್ನಾಟಕ ಕುಂಭೇಶ್ವರ ಸೇವಾ ಟ್ರಸ್ಟ್ , ನಂಬರ್ 9, 1ನೇ A ಮುಖ್ಯರಸ್ತೆ, ಐದನೇ ಅಡ್ಡರಸ್ತೆ, ಮಾರುತಿನಗರ, ನಾಗರಬಾವಿ, ಬೆಂಗಳೂರು- 72, ಫೋನ್ : 72042 22222
ಕುಂಭೇಶ್ವರ ಸೇವಾ ಟ್ರಸ್ಟ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
Students corner
1 Min Read


