ಮಂಗಳೂರು : ಬಿಜೆಪಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷರಾಗಿ ಸದಾನಂದ ನಾವರ ನೇಮಕಗೊಂಡಿದ್ದಾರೆ.
ಬೆಳ್ತಂಗಡಿ ತಾಲೂಕಿನಲ್ಲಿ ಪಕ್ಷದ ಚಟುವಟಿಕೆಗಳಲ್ಲಿ ಉತ್ತಮ ಕಾರ್ಯ ನಿರ್ವಹಿಸಿ, ಕೊಡುಗೈ ದಾನಿಯಾಗಿರುವ ಸದಾನಂದ ಅವರು ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಕ್ತೇಸರರಾಗಿ ದೇವಳದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ನಾವರ ಶ್ರೀ ಶಾರದೋತ್ಸವ ಸಮಿತಿ ಸಂಚಾಲಕರಾಗಿ ಹಾಗೂ ಹಲವಾರು ಸಂಘ-ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದು, ಸದ್ಯ ಮಂಗಳೂರಲ್ಲಿ ನೆಲೆಸಿದ್ದಾರೆ.
ಮಂಗಳೂರು ಕುಲಶೇಖರ ಮರೋಳಿ ಸೂರ್ಯನಾರಾಯಣ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿಯಾಗಿ, ಬ್ರಹ್ಮ ಕಲಶೋತ್ಸವ ಸಮಿತಿ ಪ್ರಧಾನ ಅವರು ಉತ್ತಮ ಕಾರ್ಯನಿರ್ವಹಿಸಿದ್ದರು.