ಕೊಪ್ಪಳ : ಕೊಪ್ಪಳ ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿಗಳ ಕಚೇರಿಯಲ್ಲಿ ದ್ವಿದಸ ಆಗಿ ಕಾರ್ಯ ನಿರ್ವಹಿಸಿ, ಇತ್ತೀಚೆಗೆ ವಯೋನಿವೃತ್ತಿ ಹೊಂದಿದ ವಿಠ್ಠಲ ಎಸ್ ಕುಂಬಾರ್ ಅವರಿಗೆ ಕಾರ್ಮಿಕ ಇಲಾಖೆ ವತಿಯಿಂದ ಸನ್ಮಾನಿಸಿ ಆತ್ಮೀಯವಾಗಿ ಬೀಳ್ಕೊಟ್ಟರು.
ಕೊಪ್ಪಳ ಕಾರ್ಮಿಕ ನಿರೀಕ್ಷಕ ಬಸಯ್ಯ ಅಂಗಡಿ, ಗಂಗಾವತಿ ಕಾರ್ಮಿಕ ನಿರೀಕ್ಷಕ ಶೇಖರಗೌಡ ಪಾಟೀಲ, ಕಾರ್ಮಿಕ ಇಲಾಖೆಯ ಶಿವಶಂಕರ ತಳವಾರ, ಡಿ. ದೇವರಾಜ ಅರಸು ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಪ್ರಿಯದರ್ಶಿನಿ, ಖಜಾನೆ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಅಧಿಕಾರಿ, ಸಿಬ್ಬಂದಿಗಳು, ಕಟ್ಟಡ ಕಾರ್ಮಿಕ ಸಂಘಟನೆಗಳ ಮುಖಂಡರು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಾರ್ಮಿಕ ಇಲಾಖೆಯ ವಿಠ್ಠಲ ಕುಂಬಾರ ನಿವೃತ್ತಿ : ಆತ್ಮೀಯ ಬೀಳ್ಕೊಡುಗೆ
Special Reports
1 Min Read


