ಕುಲಾಲ ಸಮಾಜ ಸೇವಾ ಸಂಘ (ರಿ ) ವಗ್ಗ, ಬಂಟ್ವಾಳ ಇದರ ವತಿಯಿಂದ 9ನೇ ವರ್ಷದ ಸಾಮೂಹಿಕ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮ ಆಗಸ್ಟ್ 12, ಶುಕ್ರವಾರ ಅಪರಾಹ್ನ 4 ಗಂಟೆಗೆ ಸಂಘದ ಮಹಿಳಾ ಘಟಕದ ಸಹಯೋಗದೊoದಿಗೆ ಕಾಡಬೆಟ್ಟು ಶ್ರೀ ಶಾರದಾoಭ ಭಜನ ಮಂದಿರದಲ್ಲಿ ವಿಜೃಂಭಣೆಯಿಂದ ನಡೆಯಿತು. ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆಯಲ್ಲಿ ಅಧಿಕ ಸಂಖ್ಯೆಯಲ್ಲಿ ಸುಮಂಗಲೆಯರು ಸಂಭ್ರಮದಿಂದ ಪಾಲ್ಗೊಂಡು ಲಕ್ಷ್ಮಿ ಕೃಪೆಗೆ ಪಾತ್ರರಾದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು ಹಾಗೂ ಮಹಿಳಾ ಘಟಕದ ಅಧ್ಯಕ್ಷರು ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬಂಟ್ವಾಳ ವಗ್ಗ ಕುಲಾಲ ಸಮಾಜ ಸೇವಾ ಸಂಘದಲ್ಲಿ 9ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜೆ
womens corner
1 Min Read







