ಮಂಗಳೂರು : ಸುರತ್ಕಲ್ ಕುಲಾಲ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿವೇತನ ವಿತರಣಾ ಸಮಾರಂಭವು ಅಗಸ್ಟ್ ೨೮ರಂದು ರವಿವಾರ ತಡಂಬೈಲಿನ ಸಂಘದ ಸಭಾಭವನದಲ್ಲಿ ಮಧ್ಯಾಹ್ನ ೨.೩೦ ಗಂಟೆಯಿಂದ ನಡೆಯಲಿರುವುದು.
ದಾನಿಗಳ, ಹಿರಿಯರ ಸಹಕಾರದಿಂದ ಈ ಕಾರ್ಯಕ್ರಮವು ಪ್ರತೀ ವರ್ಷ ನಡೆಯುತ್ತಿದ್ದು ಈ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಸುಧಾಕರ ಕುಲಾಲ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ನ್ಯಾಯವಾದಿ ರಾಂಪ್ರಸಾದ್ , ಕುಲಾಲ ಮಾತೃ ಸಂಘದ ಅಧ್ಯಕ್ಷ ಸುಜೀರ್ ಕುಡುಪು , ಎಂಆರ್ ಪಿಎಲ್ ಕಾರ್ಮಿಕ ಸಂಘ ಅಧ್ಯಕ್ಷ ಪ್ರವೀಣ್, ಮಂಗಳೂರು ವಿವಿ ಸಂಶೋಧನಾ ವಿದ್ಯಾರ್ಥಿನಿ ನಯನಾ ಮುಂತಾದವರು ಭಾಗವಹಿಸಲಿದ್ದಾರೆ.
ಸಮಾರಂಭದಲ್ಲಿ ವಿವಿಧ ಕ್ಷೇತ್ರದ ಸಾಧನೆಗೈದ ಕು. ಪೂಜಾಶ್ರೀ, ನಿಧಿ. ಜೆ. ಬಂಗೇರ, ಲಿಖಿತ ಬೊಳ್ಳಾಜೆ ಮುಂತಾದವರನ್ನು ಸಮ್ಮಾನಿಸಲಾಗುವುದು ಎಂದು ಸಂಘದ ಅಧ್ಯಕ್ಷರು ತಿಳಿಸಿದ್ದಾರೆ.
ಆಗಸ್ಟ್ 28ರಂದು ಸುರತ್ಕಲ್ ಕುಲಾಲ ಸಂಘದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿವೇತನ ವಿತರಣೆ
Students corner
1 Min Read

