ಬೆಂಗಳೂರು : ಕರ್ನಾಟಕ ರಾಜ್ಯ ಕುಂಬಾರ ಸರಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ೨೦೧೫-೧೬ನೇ ಸಾಲಿನ ಸರ್ವ ಸದಸ್ಯರ ಮಹಾಸಭೆಯು ಸೆಪ್ಟೆಂಬರ್ ೧೮ರಂದು ನಡೆಯಲಿದೆ. ಕಬ್ಬನ್ ಪಾರ್ಕ್ ನಲ್ಲಿರುವ ಕರ್ನಾಟಕ ಸರಕಾರ ಸಚಿವಾಲಯ ಕ್ಲಬ್ (ಕೆಜಿಎಸ್) ದಶಮಾನೋತ್ಸವ ಸಭಾಂಗಣದಲ್ಲಿ ನಡೆಯಲಿರುವ ಮಹಾಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಆರ್. ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಸಂಘದ ಮುಂದಿನ ರೂಪುರೇಷೆಗಳ ಕುರಿತಾಗಿ ಚರ್ಚೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಸೆಪ್ಟೆಂಬರ್ 18ರಂದು ಕರ್ನಾಟಕ ರಾಜ್ಯ ಕುಂಬಾರ ಸರಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಮಹಾಸಭೆ
Kulal news
1 Min Read