ಬೆಂಗಳೂರು (ಸೆ. ೧೮): ಕರ್ನಾಟಕ ರಾಜ್ಯ ಕುಂಬಾರ ಸರಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ೨೦೧೫-೧೬ನೇ ಸಾಲಿನ ಸರ್ವ ಸದಸ್ಯರ ಮಹಾಸಭೆಯು ಇಂದು ಬೆಂಗಳೂರಿನಲ್ಲಿ ನಡೆಯಿತು.
ಕಬ್ಬನ್ ಪಾರ್ಕ್ ನಲ್ಲಿರುವ ಕರ್ನಾಟಕ ಸರಕಾರ ಸಚಿವಾಲಯ ಕ್ಲಬ್ (ಕೆಜಿಎಸ್) ದಶಮಾನೋತ್ಸವ ಸಭಾಂಗಣದಲ್ಲಿ ನಡೆದ ಮಹಾಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಆರ್. ಶ್ರೀನಿವಾಸ್ ವಹಿಸಿದ್ದರು. ಈ ಸಭೆಯಲ್ಲಿ ಸಂಘದ ಮುಂದಿನ ರೂಪುರೇಷೆಗಳ ಕುರಿತಾಗಿ ಚರ್ಚೆ ನಡೆಯಿತು. ನಿವೃತ್ತ ಸರಕಾರೀ ನೌಕರರನ್ನು ಹಾಗೂ ಸಂಘಕ್ಕೆ ಅತೀ ಹೆಚ್ಚು ಸದಸ್ಯರನ್ನು ಸೇರ್ಪಡೆಗೊಳಿಸಿದವರನ್ನು ಸನ್ಮಾಸಿಸಲಾಯಿತು.
ಕರ್ನಾಟಕ ರಾಜ್ಯ ಕುಂಬಾರ ಸರಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಮಹಾಸಭೆ-ಸನ್ಮಾನ
Kulal news
1 Min Read