ಮಂಗಳೂರು (ಸೆ.೨೮): ಕರ್ನಾಟಕ ಲೋಕಾಯುಕ್ತ ವ್ಯಾಪ್ತಿಗೆ ಬರುವ ಭ್ರಷ್ಟಾಚಾರ ನಿರ್ಮೂಲನ ಕಾಯಿದೆ ಮತ್ತು ವಿಶೇಷ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ಶೀಘ್ರ ವಿಲೇವಾರಿಗಾಗಿ ಮಂಗಳೂರಿನ ಜಿಲ್ಲಾ ವಿಶೇಷ ನ್ಯಾಯಾಲಯಕ್ಕೆ ಸಾರ್ವಜನಿಕ ಅಭಿಯೋಜಕ (ಪಬ್ಲಿಕ್ ಪ್ರಾಸಿಕ್ಯೂಟರ್)ರಾಗಿ ನ್ಯಾಯವಾದಿ ರವೀಂದ್ರ ಮುನ್ನಿಪ್ಪಾಡಿ ಅವರನ್ನು ನೇಮಕ ಮಾಡಲಾಗಿದೆ.
ರವೀಂದ್ರ ಅವರು ಕುಲಶೇಖರ ಶ್ರೀ ವೀರನಾರಾಯಾಣ ದೇವಸ್ಥಾನದ ಆಡಳಿತ ಮಂಡಳಿಯ ಕಾರ್ಯದರ್ಶಿಯಾಗಿ 6 ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದು, ಮಂಜೇಶ್ವರ ಮೀಯಪದವು ಸಮೀಪದ ಮುನ್ನಿಪ್ಪಾಡಿ ದಿ. ನಾರಾಯಣ ಮೂಲ್ಯ ಅವರ ಪುತ್ರ. ಹಲವು ವರ್ಷಗಳಿಂದ ಇವರು ಮಂಗಳೂರಿನಲ್ಲಿ ನ್ಯಾಯವಾದಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಲೋಕಾಯುಕ್ತ ಪಬ್ಲಿಕ್ ಪ್ರಾಸಿಕ್ಯೂಟರಾಗಿ ರವೀಂದ್ರ ಮುನ್ನಿಪ್ಪಾಡಿ ನೇಮಕ
Kulal news
1 Min Read