ಉಡುಪಿ(ಅ. ೧೫): ಹೆರಿಗೆ ವೇಳೆ ಮಗು ಸಾವನ್ನಪ್ಪಿದ್ದು, ತಾಯಿಯ ಸ್ಥಿತಿ ಗಂಭೀರವಾಗಿರುವ ಘಟನೆ ಉಡುಪಿ ಮಹಿಳಾ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಮಹಿಳೆ ನಳಿನಿ ಕುಲಾಲ್ (28) ಅವರನ್ನು ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ. ಜೀವಾಪಾಯದಿಂದ ಪಾರಾದ ಗರ್ಭಿಣಿ ಮಹಿಳೆ ನಳಿನಿ ಕುಲಾಲ್ ಉಡುಪಿಯ ಪೆರ್ಡೂರು ನಿವಾಸಿಯಾಗಿದ್ದಾರೆ. ಎರಡು ದಿನಗಳ ಹಿಂದೆ ಹೆರಿಗೆ ನೋವು ಕಾಣಿಸಿದ್ದರಿಂದ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಆದರೆ ಹೆರಿಗೆ ವೇಳೆ ವೈದ್ಯರು ನಿರ್ಲಕ್ಷ್ಯ ತೋರಿದ್ದರಿಂದ ಮಗು ಸಾವನ್ನಪ್ಪಿದೆ ಎಂದು ಪೋಷಕರು ದೂರಿದ್ದಾರೆ.