ಮಂಗಳೂರು (ನ. ೧): ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ನೀಡಲಾಗುವ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಸಾಹಿತಿ ಭಾಸ್ಕರ್ ಕುಲಾಲ್ ಬರ್ಕೆ ಆಯ್ಕೆಯಾಗಿದ್ದಾರೆ. ಒಟ್ಟು ೨೨ ಮಂದಿ ಪ್ರಶಸ್ತಿಗೆ ಆಯ್ಕೆಯಾಗಿದ್ದು ಇವರಲ್ಲಿ ಕುಲಾಲ್ ಕೂಡಾ ಒಬ್ಬರು. ಹಳೆಯಂಗಡಿ ಕಂಬಳಬೆಟ್ಟು ನಿವಾಸಿಯಾಗಿರುವ ಭಾಸ್ಕರ್ ಕುಲಾಲ್ ಅವರು ಪ್ರತಿಭಾನ್ವಿತ ಕವಿಯಾಗಿದ್ದು, ತುಳುವಿನಲ್ಲಿ ಹಲವು ಸಾಹಿತ್ಯವನ್ನು ರಚಿಸಿದ್ದಾರೆ.
ಮಂಗಳೂರು ನೆಹರೂ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಸಂಸದ ನಳಿನ್ ಕುಮಾರ್ ಮುಂತಾದ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.