ಬೆಂಗಳೂರು: ಮೈಸೂರು ವಿವಿ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಪ್ರೊ. ಮಲ್ಲಿನಾಥ ಕುಂಬಾರ ಅವರಿಗೆ ಚೆನ್ನೈನಲ್ಲಿ ನಡೆದ ಅಂತಾರಾಷ್ಟ್ರೀಯ ಸಮಕಾಲೀನ ಶೈಕ್ಷಣಿಕ ಸಮ್ಮೇಳನದಲ್ಲಿ 2016ನೇ ಸಾಲಿನ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಕ್ಷೇತ್ರದಲ್ಲಿ ನೀಡಿರುವ ಕೊಡುಗೆಗಳನ್ನು ಪರಿಗಣಿಸಿ ಸಂಸ್ಥೆ ಈ ಪ್ರಶಸ್ತಿ ನೀಡಿ ಗೌರವಿಸಿದೆ. ಸಮ್ಮೇಳನದಲ್ಲಿ ಮದ್ರಾಸ್ ಹೈಕೋರ್ಟ್ನ ನ್ಯಾ.ಟಿ.ಎನ್. ವಲ್ಲಿನಾಯ್ಯಾಗಮ್ ವೀನಸ್ ಇಂಟರ್ ನ್ಯಾಷನಲ್ ಫೌಂಡೇಷನ್ನ ಡಾ. ಸತೀಶ್ ಕುಮಾರ್ ಉಪಸ್ಥಿತರಿದ್ದರು.

