ಮಂಗಳೂರು(ಫೆ.೧೩): ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಕುಂಬಾರರ ಮಹಾ ಸಂಘ/ ಕರಾವಳಿ ಕುಲಾಲ,ಕುಂಬಾರರ ಯುವವೇದಿಕೆ ಇದರ ಸಹಯೋಗದಲ್ಲಿ ಕವಿ ಸರ್ವಜ್ಞ ಜಯಂತಿ ಆಚರಣೆಯು ಫೆಬ್ರವರಿ 20, ಸೋಮವಾರದಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾ ಪಂಚಾಯತಿನ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ.
ರಾಜ್ಯ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಿಲ್ಲೆಯ ಪ್ರಮುಖ ರಾಜಕೀಯ ಹಾಗೂ ಕುಲಾಲ ಸಮುದಾಯದ ನಾಯಕರು ಭಾಗವಹಿಸಲಿರುವ ಸಭಾ ಕಾರ್ಯಕ್ರಮದಲ್ಲಿ ಡಾ. ಅಣ್ಣಯ್ಯ ಕುಲಾಲ್ ಉಳ್ತೂರು ಅವರು ಕವಿ ಸರ್ವಜ್ಞನ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಹೆಚ್ಚಿನ ವಿವರಕ್ಕೆ ಆಮಂತ್ರಣ ಪತ್ರಿಕೆ ನೋಡಿರಿ.