ಮಂಗಳೂರು/ಉಡುಪಿ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಕ್ಕೆ ಸೇರಿದ ಕುಂಬಾರ, ಸವಿತಾ, ಮಡಿವಾಳ, ಜೋಗಿ ಮತ್ತು ಗೊಲ್ಲ ಸಮುದಾಯದ ನಿರುದ್ಯೋಗಿ ಯುವಕ, ಯುವತಿಯರಿಗೆ ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹರು ಬಿಳಿ ಹಾಳೆಯಲ್ಲಿ ಅರ್ಜಿಯನ್ನು ಜಾತಿ, ಆದಾಯ ಪ್ರಮಾಣ ಪತ್ರ, ರೇಷನ್ ಕಾರ್ಡ್/ ಆಧಾರ್ ಕಾರ್ಡ್, 2 ಫೋಟೋದೊಂದಿಗೆ ಫೆಬ್ರವರಿ 28ರ ಒಳಗೆ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಲ್ಲಿಸಬೇಕು. ಮಾಹಿತಿಯನ್ನೂ ಇಲ್ಲಿಂದ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.
ಕಚೇರಿ ಇಲ್ಲಿದೆ..
*ಡಿ. ದೇವರಾಜ ಅರಸು ಹಿಂದುಳಿದ ವರ್ಗಧಿಗಳ ಅಭಿವೃದ್ಧಿ ನಿಗಮ(ನಿ), ರೇಡಿಯೋ ಪಾರ್ಕ್ ಬಳಿ, ಉರ್ವಸ್ಟೋರ್, ಮಂಗಳೂರು.
*ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), “ರಜತಾದ್ರಿ” ಜಿಲ್ಲಾಧಿಕಾರಿಗಳ ಸಂಕೀರ್ಣ, ‘ಬಿ’ ಬ್ಲಾಕ್, 2ನೇ ಮಹಡಿ, ಮಣಿಪಾಲ, ಉಡುಪಿ.