
ಬೆಳ್ತಂಗಡಿ: 2016-17ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಬೆಳ್ತಂಗಡಿ ತಾಲೂಕಿನ ವೇಣೂರು ಕುಂಭಶ್ರೀ ಆಂಗ್ಲಮಾಧ್ಯಮ ವಸತಿ ಶಾಲೆಯ ವಿದ್ಯಾರ್ಥಿನಿ ಶೃತಿ ಕುಲಾಲ್ ಅವರು 503 ಅಂಕ ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ವೇಣೂರು ಗೋಳಿಯಂಗಡಿ ಓಬಯ್ಯ ಕುಲಾಲ್ ಮತ್ತು ಶ್ರೀಮತಿ ಶಾಂಭವತಿ ದಂಪತಿಯ ಪುತ್ರಿಯಾಗಿದ್ದಾರೆ.