
ಬೆಳ್ತಂಗಡಿ: 2016-17ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಬೆಳ್ತಂಗಡಿ ತಾಲೂಕಿನ ವೇಣೂರು ಕುಂಭಶ್ರೀ ಆಂಗ್ಲಮಾಧ್ಯಮ ವಸತಿ ಶಾಲೆಯ ವಿದ್ಯಾರ್ಥಿನಿ ದಿವ್ಯ ಕುಲಾಲ್ ಅವರು 538 ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ವೇಣೂರು ನಿಟ್ಟಡೆಯ ಕಲ್ಲಾಜೆ ಮನೆಯ ಜಾರಪ್ಪ ಕುಲಾಲ್ ಮತ್ತು ಮಾಲತಿ ದಂಪತಿಯ ಪುತ್ರಿಯಾಗಿದ್ದಾರೆ.