ಮುಂಬಯಿ: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್ಇ) ನಡೆಸಿದ್ದ 2017ರ ಅವಧಿಯ 12ನೇ ತರಗತಿ ಪರೀಕ್ಷೆಯಲ್ಲಿ ಐರೋಲಿ ಡಿ.ಎ.ವಿ. ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿನಿ ಶ್ರುತಿ ಜೆ.ಅಂಚನ್ ಶೇ.95 ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಪಾಸಾಗಿ ಶಾಲೆಗೆ ತೃತೀಯ ಸ್ಥಾನಿಯಾಗಿದ್ದಾಳೆ. ಈಕೆ ಮುಂಬೈ ಕುಲಾಲ ಸಂಘದ ಗೌರವ ಕೋಶಾಧಿಕಾರಿ ಜಯ ಎಸ್. ಅಂಚನ್ ಹಾಗೂ ಮಹಿಳಾ ವಿಭಾಗದ ಕಾರ್ಯದರ್ಶಿ ಮಾಲತಿ ಜೆ.ಅಂಚನ್ ದಂಪತಿಯ ಸುಪುತ್ರಿ.


