ಮಂಗಳೂರು(ಜೂ.೧೪) : ಸುರತ್ಕಲ್ ಕುಲಾಲ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ಉಚಿತ ಪುಸ್ತಕ ವಿತರಣಾ ಸಮಾರಂಭವು ಜೂನ್ ೧೧, ರವಿವಾರ ತಡಂಬೈಲಿನ ಸಂಘದ ಸಭಾಭವನದಲ್ಲಿ ಮಧ್ಯಾಹ್ನ ನಡೆಯಿತು.
ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಸುಧಾಕರ ಕುಲಾಲ್ ಅಧ್ಯಕ್ಷತೆಯಲ್ಲಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಾನಿಲ್ತಾರ್ ಕುಲಾಲ ಸಂಘದ ಮಾಜಿ ಅಧ್ಯಕ್ಷ ಮಂಜಪ್ಪ ಮೂಲ್ಯ, ಕುಲಶೇಖರ ವೀರನಾರಾಯಣ ದೇವಸ್ಥಾನದ ಅಧ್ಯಕ್ಷ ಶ್ರೀನಿವಾಸ ಸಾಲ್ಯಾನ್ ಪಡೀಲ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎ. ದಾಮೋದರ್, ಕುಳಾಯಿ ಕುಲಾಲ ಸಂಘದ ಉಪಾಧ್ಯಕ್ಷ ದಿನೇಶ್ ಕುಲಾಲ್ ಮತ್ತಿತರರು ಉಪಸ್ಥಿತರಿದ್ದರು.
ಸಮಾರಂಭದಲ್ಲಿ ೧೦೧೬-೧೭ನೇ ಸಾಲಿನ ಶೈಕ್ಷಣಿಕ ಅವಧಿಯಲ್ಲಿ ಉತ್ತಮ ಸಾಧನೆಗೈದ ಶ್ರೇಯಾ ಕುಲಾಲ್, ಪ್ರಿಯಾ ಕುಮಾರಿ, ನಿಶ್ಚಿತಾ, ವಜ್ರೇಶ್ವರಿ, ಅಧಿತಿ ಇವರಿಗೆ ಪ್ರತಿಭಾಪುರಸ್ಕಾರ ನೀಡಿ ಸಮ್ಮಾನಿಸಲಾಯಿತು.
1ನೇ ತರಗತಿಯಿಂದ 10 ನೇ ತರಗತಿಯವರೆಗಿನ ಬಡ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ನಡೆಸಲಾಯಿತು. ಇದೇ ಸಂದರ್ಭ ಸಂಘದ ವ್ಯಾಪ್ತಿಗೊಳಪಟ್ಟ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಮತ್ತು 39%ಕ್ಕಿಂತಲೂ ಕಡಿಮೆ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗುರುತಿಸಿ ಅವರ ಶಿಕ್ಷಣಕ್ಕೆ ಪ್ರೋತ್ಸಾಹಿಸಲು ತೀರ್ಮಾನಿಸಲಾಯಿತು.