ಬಂಟ್ವಾಳ (ಸೆ.೦೩;ಕುಲಾಲ್ ವರ್ಲ್ಡ್ ನ್ಯೂಸ್) : ಕುಲಾಲ ಯಾನೆ ಕುಂಬಾರರ ಸಮಾಜ ಸೇವಾ ಸಂಘ (ರಿ.) ಸಿದ್ದಕಟ್ಟೆ ಬಂಟ್ವಾಳ ತಾಲೂಕು ಇದರ 14ನೇ ವರ್ಷದ ವಾರ್ಷಿಕೋತ್ಸವ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯು ಸೆ. ೩, ಆದಿತ್ಯವಾರ ಹೊಕ್ಕಾಡಿಗೋಳಿ ಕುಲಾಲ ಸಂಘದ ಕಟ್ಟಡದಲ್ಲಿ ಜರುಗಿತು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ.ಕ.ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಲಾಲ್ ಸಿದ್ದಕಟ್ಟೆ ವಹಿಸಿದ್ದರು. ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಂಗಳೂರು ಮೆಸ್ಕಂ ಇಲಾಖೆಯ ಕಾರ್ಯ ನಿರ್ವಾಹಕ ಇಂಜಿನಿಯರ್, ಕರ್ನಾಟಕ ರಾಜ್ಯ ಕುಂಬಾರರ ಸರಕಾರಿ ನೌಕರರ ಧ.ಕ.ಜಿಲ್ಲಾ ಘಟಕದ ಅಧ್ಯಕ್ಷರಾದ ಶ್ರೀ ಮಂಜಪ್ಪ ಕುಲಾಲ್ ಮಾತಾನಾಡುತ್ತ ನಮ್ಮ ಸಮುದಾಯದ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಬಹಳ ಮುಖ್ಯ ಎಂದರು.
ಕರ್ನಾಟಕ ರಾಜ್ಯ ಕುಲಾಲ/ ಕುಂಬಾರರ ಯುವ ವೇದಿಕೆಯ ರಾಜ್ಯ ಸಂಘಟನಾ ಕಾರ್ಯದರ್ಶಿಗಳು ಹಾಗೂ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ (ನಿ), ಪುತ್ತೂರು ಇದರ ನಿರ್ದೇಶಕರಾದ ಸಿವಿಲ್ ಇಂಜಿನಿಯರ್ ಹರೀಶ್ ಕಾರಿಂಜ ಸಭೆಯನ್ನು ಉದ್ದೇಶಿಸಿ ಮಾತನಾಡಿ ಕುಂಬಾರರ ಗುಡಿ ಕೈಗಾರಿಕಾ ಸೇವಾ ಸಂಘದಲ್ಲಿ ನಮ್ಮ ಸಮುದಾಯದ ಉನ್ನತ ವಿದ್ಯಾಭ್ಯಾಸವನ್ನು ಮಾಡುವ ವಿಧ್ಯಾರ್ಥಿಗಳಿಗೆ ಶೇಕಡಾ 4%ರ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು ಎಂದರು. ಹಾಗೆಯೇ ನಾವು ರಾಜಕೀಯವಾಗಿ ಬೆಳೆಯಲು ನಮ್ಮ ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಿಂದಲೇ ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಬೇಕೆಂದರು.
ಕರ್ನಾಟಕ ರಾಜ್ಯ ಕುಂಬಾರರ ಸರಕಾರಿ ನೌಕರರ ಸಂಘದ ನಿರ್ದೇಶಕರಾದ ಆನಂದ ಬಂಜನ್ ರವರು ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ ಸರ್ವಜ್ಞನ ಹುಟ್ಟು, ಸರ್ವಜ್ಞ ಜಯಂತಿಯ ಬಗ್ಗೆ ಮನವರಿಕೆ ಆಗುವಂತೆ ತಿಳಿಸಿ ಕೊಟ್ಟರು. ಈ ಬಗ್ಗೆ ಈಗಾಗಲೇ ಮರಳಿ ಹುಟ್ಟಿ ಬಾ ಸರ್ವಜ್ಞ ಪುಸ್ತಕವನ್ನು ಬಿಡುಗಡೆ ಮಾಡಿದ ಬಗ್ಗೆ ವಿವರಣೆ ನೀಡಿದರು.
ಶ್ರೀ ವೀರನಾರಾಯಣ ದೇವಸ್ಥಾನ ಮರೋಳಿ ಮಂಗಳೂರು ಇದರ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದಶ್ರೀ ದಾಮೋದರ ಎ. ರವರು ಸಮಾಜದ ಅಭಿವೃದ್ಧಿಯಲ್ಲಿ ಎಲ್ಲರೂ ಸಹಕರಿಸಬೇಕು ಹಾಗೆಯೇ ನಮ್ಮ ಸಮುದಾಯದ ದೇವಸ್ಥಾನದ ಅಭಿವೃದ್ಧಿ ಕೆಲಸಗಳಿಗೆ ಕೈ ಜೋಡಿಸಬೇಕೆಂದರು.
ಕುಲಾಲ ಯಾನೆ ಕುಂಬಾರರ ಸಮಾಜ ಸೇವಾ ಸಂಘದ ಅಧ್ಯಕ್ಷ ಪ್ರವೀಣ್ ಕುಲಾಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸುಶ್ಮಿತಾ ಮತ್ತು ಬಳಗದವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮ ನಂತರದಲ್ಲಿ ದಿನೇಶ್ ಕುಲಾಲ್ ಸಿದ್ದಕಟ್ಟೆ ಸ್ವಾಗತಿಸಿದರು. ಕೊನೆಯಲ್ಲಿ ಕುಮಾರಿ ರೇವತಿರವರು ಧನ್ಯವಾದ ಸಲ್ಲಿಸಿದರು. ಸಭಾ ಕಾರ್ಯಕ್ರಮವನ್ನು ಸಂತೋಷ್ ಕುಲಾಲ್ ಸಿದ್ದಕಟ್ಟೆ ರವರು ನಿರ್ವಹಿಸಿದರು.