ಉಡುಪಿ(ನ.೧೫, ಕುಲಾಲ್ ವರ್ಲ್ಡ್ ನ್ಯೂಸ್): ಪೆರ್ಡೂರು ಕುಂಬಾರರ ಗುಡಿ ಕೈಗಾರಿಕಾ ಸಹಕಾರಿ ಸಂಘಕ್ಕೆ `ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ’ ಲಭಿಸಿದೆ. ಮಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ 64 ನೇ ಅಖಿಲ ಭಾರತ ಸಹಕಾರ ಸಪ್ತಾಹ -2017′ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗಿದೆ.
ಈ ಸಂಧರ್ಭದಲ್ಲಿ ಕರ್ನಾಟಕ ರಾಜ್ಯ ಸರಕಾರದ ಸಹಕಾರಿ ಸಚಿವ ರಮೇಶ್ ಜಾರಕಿಹೊಳಿ, ಸಚಿವರಾದ ರಮಾನಾಥ ರೈ, ಪ್ರಮೋದ್ ಮದ್ವರಾಜ್, ಕೇಂದ್ರ ಸಚಿವ ಸದಾನಂದ ಗೌಡ, ಸಂಸದ ನಳಿನ್ ಕುಮಾರ್ ಕಟೀಲ್, ಸಹಕಾರಿ ರತ್ನ ಎಮ್ ಎನ್ ರಾಜೇಂದ್ರ ಕುಮಾರ್,ಉಡುಪಿ ಜಿಲ್ಲೆಯ ಸಹಕಾರಿ ಸಂಘದ ಉಪನಿಬಂಧಕ ಪ್ರವೀಣ್ ನಾಯಕ್ ಉಪಸ್ಥಿತರಿದ್ದರು.
ಈ ಪ್ರಶಸ್ತಿಯನ್ನು ಪೆರ್ಡೂರು ಕುಂಬಾರರ ಗುಡಿ ಕೈಗಾರಿಕಾ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ ಕುಲಾಲ್ ಪಕ್ಕಾಲು, ಉಪಾಧ್ಯಕ್ಷ ಶಂಕರ್ ಕುಲಾಲ್ ಪೆರಂಪಳ್ಳಿ, ಮುಖ್ಯ ಕಾರ್ಯನಿರ್ವಾಹಣಧಿಕಾರಿ ಸುದಾಕರ ಕುಲಾಲ್ ಪಟ್ಲ, ಸ್ವೀಕರಿಸಿದರು.