ಮಂಗಳೂರು(ಜ.೦೨, ಕುಲಾಲ್ ವರ್ಲ್ಡ್ ನ್ಯೂಸ್): ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ, ಕುಲಾಲ ಸಮುದಾಯದ ನಾಯಕಿ ಕಸ್ತೂರಿ ಪಂಜ ಅವರ ಪತಿ ಹೇಮಚಂದ್ರ ಅವರು ಅಸೌಖ್ಯದಿಂದ ವಿಧಿವಶರಾದರು.
ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕೆಲವು ಸಮಯಗಳಿಂದ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸ್ವಲ್ಪ ದಿನಗಳ ಹಿಂದೆ ಸ್ವಲ್ಪ ಚೇತರಿಸಿಕೊಂಡಿದ್ದ ಅವರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದರು. ವಾರಗಳ ಹಿಂದೆ ಲಿವರ್ ಸಂಬಂಧಿ ಸಮಸ್ಯೆಯಿಂದ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಜನವರಿ ೨ರಂದು ರಾತ್ರಿ ವಿಧಿವಶರಾದರು. ಹೇಮಚಂದ್ರ ಅವರು ಬ್ಯಾಂಕ್ ಉದ್ಯೋಗಿಯಾಗಿದ್ದು, ನಿವೃತ್ತಿ ಪಡೆದಿದ್ದರು. ಮೃತರು ಪತ್ನಿ, ಮೂವರು ಪುತ್ರರು, ಸೊಸೆ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಜ.೩ರಂದು ನಡೆಯಲಿದೆ.
ದಕ್ಷಿಣಕನ್ನಡ ಜಿ.ಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ ಪತಿ ಹೇಮಚಂದ್ರ ವಿಧಿವಶ
Kulal news
1 Min Read