ಪುತ್ತೂರು(ಫೆ.೨೪, ಕುಲಾಲ್ ವರ್ಲ್ಡ್ ನ್ಯೂಸ್): ಇಲ್ಲಿನ ಕುಲಾಲ ಸಮಾಜ ಸೇವಾ ಸಂಘಕ್ಕೆ ನಿವೇಶನ ಮಂಜೂರು ಮಾಡುವಂತೆ ಕಂದಾಯ ಸಚಿವ ಕಾಗೋಡು ತಿಮ್ಮಪ್ಪರಿಗೆ ಸಂಘದ ವತಿಯಿಂದ ಬೆಂಗಳೂರಿನಲ್ಲಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ದಿನೇಶ್ ಪಿ ವಿ. ಮಾಜಿ ಅಧ್ಯಕ್ಷರಾದ ಜನಾರ್ದನ ಬಂಗೇರ, ಶಾಸಕಿ ಶಕುಂತಲಾ ಟಿ ಶೆಟ್ಟಿ ಮೊದಲಾದ ಗಣ್ಯರು ಉಪಸ್ಥಿತರಿದ್ದರು.