ಮಂಗಳೂರು(ಫೆ.೨೫, ಕುಲಾಲ್ ವರ್ಲ್ಡ್ ಡಾಟ್ ಕಾಮ್): ಇತ್ತೀಚೆಗೆ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಜರುಗಿದ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಜಾವಲಿನ್ ಎಸೆತದಲ್ಲಿ ಭಾಗವಹಿಸಿದ ಗಿರಿಧರ್ ಸಾಲ್ಯಾನ್ ಬೆಳ್ಳಿ ಪದಕ ಪಡೆದು ಸ್ಪೇನ್ ನಲ್ಲಿ ನಡೆಯುವ ಅಂತಾರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಗಿರಿಧರ ಅವರು ಕದ್ರಿಹಿಲ್ಸ್ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ (ಐಟಿಐ) ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಜಾವಲಿನ್ ಎಸೆತದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆ
sports
1 Min Read