ಮಂಜೇಶ್ವರ(ಜೂ.೦೧, ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕಾಸರಗೋಡು ತಾಲೂಕು ಕುಲಾಲ ಸಂಘ ಹೊಸಬೆಟ್ಟು ಮಂಜೇಶ್ವರ ಘಟಕದ 2018-19ನೇ ಸಾಲಿನ ಅಧ್ಯಕ್ಷರಾಗಿ ನ್ಯಾಯವಾದಿ ರವೀಂದ್ರ ಮುನ್ನಿಪ್ಪಾಡಿ ಆಯ್ಕೆಯಾಗಿದ್ದಾರೆ.
ಮಂಜೇಶ್ವರ ಮೀಯಪದವು ಸಮೀಪದ ಮುನ್ನಿಪ್ಪಾಡಿ ದಿ. ನಾರಾಯಣ ಮೂಲ್ಯ ಅವರ ಪುತ್ರರಾಗಿರುವ ರವೀಂದ್ರ ಅವರು ಕಳೆದ ಹಲವು ವರ್ಷಗಳಿಂದ ಮಂಗಳೂರಿನಲ್ಲಿ ನ್ಯಾಯವಾದಿಯಾಗಿದ್ದು, ಸಂಘದ ಕಾರ್ಯದರ್ಶಿಯಾಗಿ, ಕೋಶಾಧಿಕಾರಿಯಾಗಿ, ಉಪಾಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸಿದ್ದರು. ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದ ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿಯಾಗಿ, ಮಂಗಳೂರಿನ ಜಿಲ್ಲಾ ಲೋಕಾಯುಕ್ತ ನ್ಯಾಯಾಲಯಕ್ಕೆ ಹೆಚ್ಚುವರಿ ವಿಶೇಷ ಸಾರ್ವಜನಿಕ ಅಭಿಯೋಜಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.