ಪುತ್ತೂರು(ಜೂ.೧೨, ಕುಲಾಲ್ ವರ್ಲ್ಡ್ ಡಾಟ್ ಕಾಮ್): ಇಲ್ಲಿನ ಸಂತ ಫಿಲೋಮಿನಾ ಕಾಲೇಜಿನ ಭೌತಶಾಸ್ತ್ರ ವಿಭಾಗ ಸಹಾಯಕ ಪ್ರಾಧ್ಯಾಪಕ ಚಂದ್ರಶೇಖರ .ಕೆ. ಅವರು ಮಂಡಿಸಿದ `ಸ್ಟಡೀಸ್ ಆನ್ ಕಾನ್ಸ೦ಸ್ಟ್ರೇಶನ್ ಆಫ್ ರೇಡಿಯೋ ನ್ಯೂಕ್ಲಿಯಡ್ಸ್ ಆಂಡ್ ಟ್ರೇಸ್ ಎಲಿಮೆಂಟ್ಸ್ ಇನ್ ಸಮ್ ಸೆಲೆಕ್ಟಡ್ ಮೆಡಿಸಿನಲ್ ಪ್ಲಾಂಟ್ಸ್’ ಮಹಾ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಭೌತಶಾಸ್ತ್ರದಲ್ಲಿ ಪಿಎಚ್ ಡಿ ಪದವಿ ನೀಡಿ ಗೌರವಿಸಿದೆ.
ಇವರು ಮಂಗಳೂರು ವಿಶ್ವ ವಿದ್ಯಾನಿಲಯದ ವಿಜ್ಞಾನ ಉಪಕರಣ ಕೇಂದ್ರದ ಪ್ರಾಧ್ಯಾಪಕ ಪ್ರೊ. ಎಚ್ ಸೋಮಶೇಖರಪ್ಪ ಅವರ ಮಾರ್ಗದರ್ಶನದಲ್ಲಿ ಪ್ರಬಂಧವನ್ನು ಸಿದ್ಧಪಡಿಸಿದ್ದರು. ಚಂದ್ರಶೇಖರ ಅವರು ಅನೇಕ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸಮ್ಮೇಳನಗಳಲ್ಲಿ ತನ್ನ ಪ್ರಬಂಧವನ್ನು ಮಂಡಿಸಿದ್ದಾರೆ. ಕಟೀಲು ದುರ್ಗಾಪರಮೇಶ್ವರಿ ಕಾಲೇಜಿನಲ್ಲಿ ತನ್ನ ವೃತ್ತಿ ಜೀವನ ಪ್ರಾರಂಭಿಸಿರುವ ಇವರು ಬಳಿಕ ಯುಜಿಸಿ ನಡೆಸುವ ಸ್ಲೆಟ್ ಪರೀಕ್ಷೆಯಲ್ಲಿ ತೇರ್ಗಡೆಗೊಂಡು ಫಿಲೋಮಿನಾ ಕಾಲೇಜಿನಲ್ಲಿ ಭೌತಶಾಸ್ತ್ರ ಉಪನ್ಯಾಸಕರಾಗಿ ನೇಮಕಗೊಂಡಿದ್ದರು. ಬಂಟ್ವಾಳ ಪುಣಚಾ ಗ್ರಾಮದ ಕೊಚ್ಚಿ ಮನೆಯ ಮಹಾಲಿಂಗ ಮೂಲ್ಯ ಮತ್ತು ಲಕ್ಷ್ಮೀ ದಂಪತಿಯ ಸುಪುತ್ರರಾಗಿರುವ ಚಂದ್ರಶೇಖರ ಅವರು ಈ ಹಿಂದೆ ಪುತ್ತೂರು ಕುಲಾಲ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.