
ಕಾಸರಗೋಡು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕೇರಳ ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಾಸರಗೋಡು ಬದಿಯಡ್ಕ ನವಜೀವನ ಹೈಯರ್ ಸೆಕೆಂಡರಿ ಸ್ಕೂಲ್ ನ ವಿದ್ಯಾರ್ಥಿನಿ ಹರ್ಷಿತಾ ಎನ್ ಅವರು ವಿಜ್ಞಾನ ವಿಭಾಗದಲ್ಲಿ 96% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪೆರಡಾಲ ಚೆನ್ನರಕಟ್ಟೆಯ ಮಹಾಲಿಂಗ ಹಾಗೂ ಪುಷ್ಪಾ ದಂಪತಿಯ ಸುಪುತ್ರಿ.