ಬೆಳ್ತಂಗಡಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್) : ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ, ಕುಲಾಲ/ಕುಂಬಾರ ಯುವ ವೇದಿಕೆ ಸಹಯೋಗದಲ್ಲಿ ಸ್ವಜಾತಿ ಪ್ರತಿಭಾವಂತ ಮತ್ತು ಅರ್ಹ ಬಡ ವಿದ್ಯಾರ್ಥಿಗಳಿಗೆ 2018-19ನೇ ವರ್ಷದ ವಿದ್ಯಾರ್ಥಿವೇತನ ವಿತರಣೆ ಹಾಗೂ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮವು ನ.4 ರಂದು ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಜರುಗಿತು.
ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷ ಹರೀಶ್ ಕಾರಿಂಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ , ವಿಧಾನ ಪರಿಷತ್ ಸದಸ್ಯ ಕೆ ಹರೀಶ್ ಕುಮಾರ್, ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಯ ನೇತ್ರ ತಜ್ಞ ಡಾ| ರಮೇಶ್, ಪುಂಜಾಲಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜು ಭೌತ ಶಾಸ್ತ್ರ ಉಪನ್ಯಾಸಕ ನಿತ್ಯಾನಂದ ಕುಲಾಲ್ ಹೆಚ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಗುರುವಾಯನಕೆರೆ ಸರಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಜಗನ್ನಾಥ ಕುಲಾಲ್, ವೇಣೂರು ಕುಂಭಶ್ರೀ ವಿದ್ಯಾ ಸಂಸ್ಥೆಯ ಸಂಸ್ಥಾಪಕ, ಸ್ಟಾರ್ ಆಪ್ ಏಷ್ಯಾ ಪ್ರಶಸ್ತಿ ಮತ್ತು ಪ್ರಬುದ್ಧ ಭಾರತ ಪ್ರಶಸ್ತಿ ವಿಜೇತ ಗಿರೀಶ್ ಕೆ ಹೆಚ್, ಫ್ಯಾರಾ ಮಿಲಿಟರಿ ರ್ಯಾಪಿಡ್ ಆಕ್ಷನ್ ಫೋರ್ಸ್ ನಿವೃತ್ತ ಸೈನಿಕ ಮೋಹನ ಕುಲಾಲ್ ಅಳದಂಗಡಿ ಇವರುಗಳನ್ನು ಸನ್ಮಾನಿಸಲಾಯಿತು.
ಪೂಂಜಾಲಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ನಿತ್ಯಾನಂದ ಕುಲಾಲ್ ವಿದ್ಯಾರ್ಥಿಗಳಿಗೆ ಪರೀಕ್ಷೆಯ ಪೂರ್ವ ತಯಾರಿ ಕುರಿತು ಉಪನ್ಯಾಸ ನೀಡಿದರು. ಗುರುವಾಯನಕೆರೆಯ ಕುಮಾರಿ ವೀಕ್ಷಾ ಕುಲಾಲ್ ರವರ ಪ್ರಾರ್ಥನೆ ಮೂಲಕ ಪ್ರಾರಂಭವಾದ ಸಭೆಯನ್ನು ಸಂಘದ ಉಪಾಧ್ಯಕ್ಷ ಸೋಮಯ್ಯ ಹನೈನಡೆ ಸ್ವಾಗತಿಸಿದರು. ಸಂಘದ ಕಾರ್ಯದರ್ಶಿ ಮಹೇಶ್ ಕುಲಾಲ್ ಧನ್ಯವಾದ ಸಲ್ಲಿಸಿದರು. ಕಾರ್ಯಕ್ರಮವನ್ನು ಆಕಾಶ್ ಕುಲಾಲ್ ಬಳ್ಳಮಂಜ ಮತ್ತು ಬಿ ಹೆಚ್ ರಾಜು ಬೆಳ್ತಂಗಡಿ ಇವರು ನಿರೂಪಣೆ ಮಾಡಿದರು.
ಕಾರ್ಯಕ್ರಮದಲ್ಲಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಹಾಗೂ ಕುಲಾಲ/ಕುಂಬಾರ ಯುವ ವೇದಿಕೆ ಅಧ್ಯಕ್ಷರು, ಸರ್ವಸದಸ್ಯರು ಭಾಗವಹಿಸಿದ್ದರು.